ಕುಷ್ಠರೋಗ ಮುಕ್ತ ಸಮಾಜಕ್ಕಾಗಿ ‘ಸ್ಪರ್ಶ’ ಜಾಗೃತಿ ಅಭಿಯಾನ
Kemmannu News Network, 28-01-2020 16:32:10
ಉಡುಪಿ : ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ 2020ರ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರೀತಿ ಗೆಹಲೋತ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸೋಮವಾರ ನಡೆಯಿತು.
ಕುಷ್ಠ ರೋಗದ ವಿರುದ್ಧ ಅಂತಿಮ ಸಮರ ಸಾರುವ ಧ್ಯೇಯದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜನವರಿ 30 ರಿಂದ ಫೆಬ್ರವರಿ 13 ರವರೆಗೆ ಸ್ಪರ್ಶಕುಷ್ಠ ರೋಗ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದು, ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಜನವರಿ 30 ರಂದು ಪ್ರತಿಜ್ಞೆಯನ್ನು ಕೈಗೊಳ್ಳಲಾಗುವುದು. ಕುಷ್ಠರೋಗದ ಬಗ್ಗೆ ಸಮಾಜದಲ್ಲಿ ಬೇರೂರಿರುವ ತಪ್ಪು ತಿಳುವಳಿಕೆ ಮತ್ತು ಅರಿವಿನ ಕೊರತೆ, ಕುಷ್ಠರೋಗಕ್ಕೆ ಅಂಟಿಕೊಂಡಿರುವ ಕಳಂಕ ಹಾಗೂ ತಾರತಮ್ಯವನ್ನು ಹೋಗಲಾಡಿಸಿ, ಕುಷ್ಠರೋಗಿಗಳಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ 2017 ರಿಂದ ಮಹಾತ್ಮಾ ಗಾಂಧೀಜಿ ಹುತಾತ್ಮರಾದ ದಿನವನ್ನು ಕುಷ್ಠರೋಗ ನಿರ್ಮೂಲನಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಕುಷ್ಠರೋಗವನ್ನು ಆರಂಭಿಕ ಹಂತದಲ್ಲೆ ಪತ್ತೆ ಮಾಡಿ, ವ್ಯಕ್ತಿಗೆ ಸಂಪೂರ್ಣ ಚಿಕಿತ್ಸೆ ನೀಡಿದಲ್ಲಿ ಕುಷ್ಠರೋಗವನ್ನು ಗುಣಪಡಿಸಬಹುದು. ಕುಷ್ಠರೋಗದ ಬಗ್ಗೆ ಇರುವ ಹೆದರಿಕೆಯನ್ನು ದೂರಮಾಡಲು ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಜಿಲ್ಲೆಯಲ್ಲಿ ಕುಷ್ಠ ರೋಗದ 32 ಪ್ರಕರಣಗಳು ಪತ್ತೆಯಾಗಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಭಾರತವನ್ನು ಕುಷ್ಠರೋಗ ಮುಕ್ತವಾಗಿಸುವುದು ಗಾಂಧೀಜಿ ಕನಸಾಗಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಂದಾಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಭಾಗಿತ್ವದೊಂದಿಗೆ ಮನೆ ಮನೆಗೆ ತೆರಳಿ ಕುಷ್ಠ ರೋಗದ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಳ್ಳಲಿದೆ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಸುರೇಂದ್ರ ಚಿಂಬಾಳ್ಕರ್ ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯನ್ನು ಕುಷ್ಠರೋಗ ಮುಕ್ತವನ್ನಾಗಿಸಲು ಎಲ್ಲಾ ಇಲಾಖೆಗಳಿಂದ ಬೇಕಾಗಿರುವ ಸಂಪೂರ್ಣ ಸಹಕಾರವನ್ನು ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರೀತಿ ಗೆಹಲೋತ್ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ಆರ್. ಶೇಷಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ ಮತ್ತಿತರರು ಉಪಸ್ಥಿತರಿದ್ದರು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Congratulations on your selection for National Level Cricket from Kemmannu.
Final Journey of Juliana Lewis (88 years) | LIVE from Milagres, Kallianpur, Udupi
Final Journey of Roque Harold D’Souza | LIVE from Manipal/Thottam | Udupi
Final Journey of Irene Mathias (89 years) | LIVE from Kemmannu
Final Journey of Ivan D’Lima (70 years) | LIVE From Barkur | Body Donated to KMC, Manipal
Brand New Flats for Sale in Malpe - Udupi
Final Journey of Serphine Noronha ( 93 Years ) | LIVE From Palimar
Rozaricho Gaanch October 2024 Issue from Mount Rosary Church, Kallianpur, Udupi
Final Journey of Dr. Celine Rodrigues (83 years) | LIVE from Udupi
Milarchi Lara, Milagres Cathedral, Kallianpur, Parish Bulletin_ September 2024
Final Journey of Michael B. R. Lewis (74 years) | LIVE from Kallianpur | Udupi
Final Journey of Lancelot Crasta (66 years) | LIVE From Kemmannu | Udupi
Final Journey of Mrs. Lilly D’Souza | LIVE from Sasthan
Final Journey of Fr.Valerian Mendonca (75 years) | LIVE from Kallianpur,Udupi.
Land/Houses for Sale in Kaup, Manipal, Kallianpur, Santhekatte, Uppor, Nejar, Kemmannu, Malpe, Ambalpady.
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Naturya - Taste of Namma Udupi - Order NOW
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link