ಜಿಲ್ಲೆಯ 203 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವದ ಭೀತಿ
Kemmannu News Network, 27-03-2024 15:50:05
ಉಡುಪಿ, ಮಾರ್ಚ್ 27 : ಪ್ರಸ್ತುತ ಬೇಸಿಗೆ ಪ್ರಾರಂಭವಾಗಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಬೇಸಿಗೆ ಬಿಸಿಲಿಗೆ ಕುಡಿಯುವ ನೀರಿನ ಮೂಲಗಳು ಕಡಿಮೆಯಾಗುತ್ತಿರುವ ಹಿನ್ನೆಲೆ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹಲವು ಮುಂಜಾಗ್ರತಾ ಕ್ರಮಗಳನ್ನು ಗ್ರಾಮೀಣ ಭಾಗದಲ್ಲಿ ಕೈಗೊಳ್ಳಲಾಗುತ್ತಿದೆ.
ಜಿಲ್ಲೆಯ 155 ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಒಟ್ಟು 247 ಗ್ರಾಮಗಳಿದ್ದು, ಇವುಗಳಲ್ಲಿ ಬ್ರಹ್ಮಾವರ ತಾಲೂಕಿನ 25 ಗ್ರಾಮ ಪಂಚಾಯತ್ಗಳ 42 ಗ್ರಾಮಗಳ 337 ಜನವಸತಿ ಪ್ರದೇಶ, ಕಾಪು ತಾಲೂಕಿನ 10 ಗ್ರಾಮ ಪಂಚಾಯತ್ಗಳಲ್ಲಿ 16 ಗ್ರಾಮಗಳ 100 ಜನವಸತಿ ಪ್ರದೇಶ, ಉಡುಪಿ ತಾಲೂಕಿನ 12 ಗ್ರಾಮ ಪಂಚಾಯತ್ಗಳ 23 ಗ್ರಾಮಗಳ 164 ವಸತಿ ಪ್ರದೇಶ, ಹೆಬ್ರಿ ತಾಲೂಕಿನ 9 ಗ್ರಾಮ ಪಂಚಾಯತ್ಗಳ 15 ಗ್ರಾಮಗಳ 79 ಜನವಸತಿ ಪ್ರದೇಶ, ಕಾರ್ಕಳ ತಾಲೂಕಿನ 21 ಗ್ರಾಮ ಪಂಚಾಯತ್ನ 26 ಗ್ರಾಮಗಳ 88 ಜನವಸತಿ ಪ್ರದೇಶ, ಬೈಂದೂರು ತಾಲೂಕಿನ 15 ಗ್ರಾಮ ಪಂಚಾಯತ್ಗಳ 22 ಗ್ರಾಮಗಳ 244 ವಸತಿ ಪ್ರದೇಶ ಹಾಗೂ ಕುಂದಾಪುರ ತಾಲೂಕಿನ 38 ಗ್ರಾಮ ಪಂಚಾಯತ್ನ 59 ಗ್ರಾಮಗಳ 415 ಜನವಸತಿ ಪ್ರದೇಶ ಸೇರಿದಂತೆ ಒಟ್ಟು ಜಿಲ್ಲೆಯ 130 ಗ್ರಾಮ ಪಂಚಾಯತ್ಗಳ 203 ಗ್ರಾಮಗಳ 1427 ಜನವಸತಿ ಪ್ರದೇಶಗಳಲ್ಲಿ ಮುಂದಿನ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಅಂದಾಜಿಸಲಾಗಿರುತ್ತದೆ.
ಕುಡಿಯುವ ನೀರಿನ ಸಮಸ್ಯೆ ಎದುರಿಸುವ ನಿಟ್ಟಿನಲ್ಲಿ ಗ್ರಾಮಸ್ಥರಿಗೆ ಕುಡಿಯುವ ನೀರು ಒದಗಿಸುವ ದೃಷ್ಟಿಯಿಂದ ಸರ್ಕಾರಿ ಹಾಗೂ ಖಾಸಗೀ ಒಡೆತನದ 70 ಕ್ಕೂ ನೀರು ಲಭ್ಯವಿರುವ ಕೊಳವೆ ಬಾವಿಗಳನ್ನು ಹಾಗೂ 25 ಬಾವಿಗಳನ್ನು ಗುರುತಿಸಲಾಗಿದೆ.
ಜಿಲ್ಲೆಯ ಕಾರ್ಕಳ, ಹೆಬ್ರಿ ಮತ್ತು ಬ್ರಹ್ಮಾವರ ತಾಲೂಕು (ಭಾಗಶಃ) ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಈ ತಾಲೂಕುಗಳಿಗೆ ತಲಾ ರೂ.25.00 ಲಕ್ಷದಂತೆ ಒಟ್ಟು ರೂ.75.00 ಲಕ್ಷ ಅನುದಾನ ಕುಡಿಯುವ ನೀರಿನ ತುರ್ತು ಅಗತ್ಯತೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರದಿಂದ ಬಿಡುಗಡೆಯಾಗಿರುತ್ತದೆ. ಅಲ್ಲದೆ ಪ್ರತೀ ತಾಲೂಕಿಗೆ ತಲಾ ರೂ.20.00 ಲಕ್ಷದಂತೆ ಒಟ್ಟು ರೂ.140.00 ಲಕ್ಷ ತುರ್ತು ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನ ಒದಗಿಸಲಾಗಿದೆ.
ಸಾರ್ವಜನಿಕರು ಸ್ಥಳೀಯ ಗ್ರಾಮ ಪಂಚಾಯತ್ ನಿಂದ ಸರಬರಾಜು ಮಾಡುವ ಕುಡಿಯುವ ನೀರನ್ನು ಅನಾವಶ್ಯಕವಾಗಿ ಪೋಲು ಮಾಡದೆ ಹಿತಮಿತವಾಗಿ ಬಳಸಬೇಕು. ಕುಡಿಯುವ ನೀರಿನ ಪೈಪ್ಲೈನ್ನಲ್ಲಿ ದುರಸ್ತಿ ಬಂದಲ್ಲಿ ತುರ್ತಾಗಿ ಗ್ರಾಮ ಪಂಚಾಯತ್ ವತಿಯಿಂದ ಕ್ರಮವಹಿಸಲು ಈಗಾಗಲೇ ಸೂಚಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ತೀವ್ರ ಕುಡಿಯುವ ನೀರಿನ ಅಭಾವ ಉಂಟಾದಲ್ಲಿ ಖಾಸಗಿ ಬೋರ್ವೆಲ್, ಬಾವಿ ಗುರುತಿಸಿ, ಅವುಗಳನ್ನು ಬಾಡಿಗೆಗೆ ತೆಗೆದುಕೊಂಡು ನೀರು ಒದಗಿಸಲು ತಿಳೀಸಿದೆ.
ಎಸ್.ಎಲ್.ಆರ್.ಎಮ್ ವಾಹನದ ಮೂಲಕ ಅಥವಾ ಖಾಸಗಿ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಪೂರೈಸುವ ಅನಿವಾರ್ಯತೆ ಉಂಟಾದಲ್ಲಿ ಸಂಬಂದಿಸಿದ ಗ್ರಾಮ ಪಂಚಾಯತ್ ವತಿಯಿಂದ ಕ್ರಮ ವಹಿಸಲು ಸೂಚಿಸಿದೆ.
ಸಾರ್ವಜನಿಕರು ಕುಡಿಯುವ ನೀರನ್ನು ಉದ್ಯಾನಗಳಿಗೆ, ವಾಹನ ತೊಳೆಯಲು ಇತ್ಯಾದಿ ಅನ್ಯ ಉದ್ದೇಶಕ್ಕೆ ಬಳಸಬಾರದು. ಅನ್ಯ ಉದ್ದೇಶಗಳಿಗೆ ಕುಡಿಯುವ ನೀರನ್ನು ಬಳಸಿದಲ್ಲಿ ಸ್ಥಳೀಯ ಪಂಚಾಯತ್ ವತಿಯಿಂದ ಸರಬರಾಜಾಗುತ್ತಿರುವ ನೀರಿನ ಸಂಪರ್ಕವನ್ನು ಕಡಿತಗೊಳಿಸಲು ತಿಳಿಸಿದೆ.
ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಜಿಲ್ಲಾ ಮಟ್ಟದಲ್ಲಿ ತೆರೆಯಲಾದ 24*7 ಸಹಾಯವಾಣಿ ಸಂಪರ್ಕ ಸಂಖ್ಯೆ 18004257049 ಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Easter Vigil 2024 | Holy Saturday | St. Theresa’s Church, Kemmannu, Udupi | LIVE
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
2 BHK Flat for sale on the 6th floor of Eden Heritage, Santhekatte, Kallianpur, Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Confraternity Sunday | St. Theresa’s Church, Kemmannu
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link