ಬಿಜೆಪಿ ಗೆಲುವಿಗೆ ಮಹಿಳಾ ಕಾರ್ಯಕರ್ತರಿಂದ ’ಮರಳಿ ಬಂದಿದೆ ಯುಗಾದಿ ಮತ್ತೆ ಬರುವರು ಮೋದಿ’ ಹಾಗೂ ’ಶಕ್ತಿ ಚೌಪಾಲ್’ ಅಭಿಯಾನ
Kemmannu News Network, 10-04-2024 16:16:58
’ಸಬ್ ಕೇ ಸಾಥ್ ಸಬ್ ಕಾ ವಿಕಾಸ್’ ತತ್ವದಡಿ ಎಲ್ಲ ವರ್ಗಗಳ ಕಲ್ಯಾಣಕ್ಕೆ ಕಂಕಣಬದ್ಧರಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸಮಸ್ತ ಮಹಿಳೆಯರ ಭರವಸೆಯ ನಾಯಕರಾಗಿದ್ದಾರೆ.
ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಯೋಚನೆ-ಯೋಜನೆಗಳಿಂದ ’ದೇಶಕ್ಕೆ ಮೋದಿಯೇ ಗ್ಯಾರಂಟಿ’ ಎನ್ನುವುದನ್ನು ಈಗಾಗಲೇ ಮಹಿಳಾ ಮತದಾರರು ಅರ್ಥೈಸಿಕೊಂಡಿದ್ದು ಮುoದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿಗೆ ಕ್ಷೇತ್ರದ ನಾರೀ ಶಕ್ತಿ ಮಹತ್ತರ ಕೊಡುಗೆ ನೀಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ ಅವರು ತಿಳಿಸಿದರು.
ಅವರು ಬಿಜೆಪಿ ಜಿಲ್ಲಾ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಪ್ರಧಾನಿ ಮೋದಿ ನೇತೃತ್ವದ ಕೇoದ್ರ ಸರಕಾರ ಕಳೆದ 10 ವರ್ಷಗಳ ಅವಧಿಯಲ್ಲಿ ವಿವಿಧ ಕ್ಷೇತ್ರಗಳ ಮಹಿಳೆಯರ ಅಗತ್ಯತೆಗಳಿಗೆ ತಕ್ಕಂತೆ ವಿನೂತನ ಯೋಜನೆಗಳನ್ನು ರೂಪಿಸಿ ಪರಿಣಾಮಕಾರಿಯಾಗಿ ಜಾರಿಗೆ ತಂದಿದೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಏ.14 ಯುಗಾದಿಯ ಶುಭ ದಿನದಂದು ಬಿಜೆಪಿ ಮಹಿಳಾ ಕಾರ್ಯಕರ್ತರಿಂದ ’ಮರಳಿ ಬಂದಿದೆ ಯುಗಾದಿ ಮತ್ತೆ ಬರುವರು ಮೋದಿ’ ಅಭಿಯಾನ ಆರಂಭಗೊಳ್ಳಲಿದ್ದು ಮಹಿಳಾ ಕಾರ್ಯಕರ್ತರು ಮನೆ ಮನೆ ಸಂಪರ್ಕ ನಡೆಸಿ ಮೋದಿ ಸರಕಾರದ ಸಾಧನೆಗಳನ್ನು ಮತ್ತು ದೇಶಕ್ಕೆ ಮೋದಿ ನಾಯಕತ್ವದ ಅಗತ್ಯತೆಯನ್ನು ಮಹಿಳಾ ಮತದಾರರಿಗೆ ಮನವರಿಕೆ ಮಾಡಲಿದ್ದಾರೆ ಎಂದರು.
ಜಿಲ್ಲೆಯಾದ್ಯಂತ ಪ್ರತಿ ಬೂತ್ ಗಳಲ್ಲಿ ’ಶಕ್ತಿ ಚೌಪಾಲ್’ ಅಭಿಯಾನದಡಿ ಮಹಿಳೆಯರ ಕಾರ್ನರ್ ಸಭೆಗಳು ಈಗಾಗಲೇ ಆರಂಭಗೊಂಡಿದ್ದು ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ 1,112 ಬೂತ್ ಗಳಲ್ಲಿ ಸುಮಾರು 3,500 ಕಾರ್ನರ್ ಸಭೆಗಳು ನಡೆಯಲಿವೆ ಎಂದರು.
ಮಂಡಲ ಶಹ ಮಹಿಳಾ ಸಮಾವೇಶಗಳು ಏ.18 ಮತ್ತು 19ರಂದು ನಡೆಯಲಿವೆ ಎಂದು ಅವರು ತಿಳಿಸಿದರು.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1,31,430 ಮಂದಿ ಮಹಿಳೆಯರು ಉಜ್ವಲ ಯೋಜನೆಯ ಪ್ರಯೋಜನವನ್ನು ಪಡೆದಿದ್ದಾರೆ. ದೀನದಯಾಳ್ ಅಂತ್ಯೋದಯ ಯೋಜನೆಯಡಿ 1,73,387 ಮಂದಿ ಫಲಾನುಭವಿಗಳಿದ್ದು, ಜಲ್ ಜೀವನ್ ಮಿಷನ್ ಯೋಜನೆಯಡಿ 3,61,476 ಮಂದಿ ಶುದ್ಧ ಕುಡಿಯುವ ನೀರಿನ ಸಂಪರ್ಕವನ್ನು ಹೊಂದಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸುಮಾರು 52,201 ಮನೆಗಳು ನಿರ್ಮಾಣಗೊಂಡಿವೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ 12,02,000 ಮಂದಿ ಫಲಾನುಭವಿಗಳು ಉಚಿತ ಅಕ್ಕಿಯನ್ನು ಪಡೆಯುತ್ತಿದ್ದು, ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಸುಮಾರು 80,984 ಶೌಚಾಲಯಗಳು ನಿರ್ಮಾಣಗೊಂಡಿವೆ. 2024ರ ವರೆಗೆ ಕ್ಷೇತ್ರದಾದ್ಯoತ ಒಟ್ಟು 7,74,231 ಎಲ್ಇಡಿ ಬಲ್ಬ್ ಗಳನ್ನು ವಿತರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಕಳೆದ 10 ವರ್ಷಗಳ ಆಡಳಿತಾವಧಿಯಲ್ಲಿ ಯಾವುದೇ ಭ್ರಷ್ಟಾಚಾರವಿಲ್ಲದೆ ಸಂಪೂರ್ಣವಾಗಿ ದೇಶದ ಹಿತಕ್ಕಾಗಿ ತನ್ನನ್ನು ಮುಡಿಪಾಗಿಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರ ಕಣ್ಮಣಿಯಾಗಿದ್ದಾರೆ.
ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುವ ಸಂಕಲ್ಪದೊಂದಿಗೆ ಜಿಲ್ಲೆಯ ನಾರೀ ಶಕ್ತಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗರಿಷ್ಠ ಅಂತರದ ಮತಗಳಿಂದ ಗೆಲ್ಲಿಸುವ ಪಣತೊಟ್ಟು ಬದ್ಧತೆಯಿಂದ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ರೇಷ್ಮಾ ಉದಯ್ ಶೆಟ್ಟಿ ತಿಳಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಶ್ಯಾಮಲಾ ಎಸ್. ಕುಂದರ್, ಜಿಲ್ಲಾ ಕಾರ್ಯದರ್ಶಿಗಳಾದ ಅನಿತಾ ಶ್ರೀಧರ್, ಪ್ರಿಯದರ್ಶಿನಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಒಬಿಸಿ ಮೋರ್ಚಾ ಉಪಾಧ್ಯಕ್ಷೆ ಭಾರತೀ ಚಂದ್ರಶೇಖರ್ ಉಪಸ್ಥಿತರಿದ್ದರು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Final Journey of Emilian Bridget D’Souza (80 years) | LIVE from Kemmannu | Udupi |
2 BHK Flat for sale on the 6th floor of Eden Heritage, Santhekatte, Kallianpur, Udupi
Obituary: Emilian Bridget D’Souza (80), Gudiyam, Kemmannu
Agricultural Land at Alevoor and Malpe (UDUPI) for Sale - Contact Direct to 9008199430.
Final Journey of Judith Lewis (91 years) | LIVE From Kallianpur
Rozaricho Gaanch April, 2024 - Ester issue
Final Journey Of Theresa D’Souza (79 years) | LIVE From Kemmannu | Udupi |
Invest Smart and Earn Big!
Creating a World of Peaceful Stay!
For the Future Perfect Life that you Deserve! Contact : Rohan Corporation, Mangalore.
Final Journey Of Joe Victor Lewis (46 years) | LIVE From Kemmannu | Organ Donor | Udupi |
Milagres Cathedral, Kallianpur, Udupi - Parish Bulletin - Feb 2024 Issue
Way Of Cross on Good Friday 2024 | Live From | St. Theresa’s Church, Kemmannu, Udupi | LIVE
Good Friday 2024 | St. Theresa’s Church, Kemmannu | LIVE | Udupi
Maundy Thursday 2024 | LIVE From St. Theresa’s Church, Kemmannu | Udupi |
Kemmennu for sale 1 BHK 628 sqft, Air Conditioned flat
Symphony98 Releases Soul-Stirring Rendition of Lenten Hymn "Khursa Thain"
Palm Sunday 2024 at St. Theresa’s Church, Kemmannu | LIVE
Final Journey of Patrick Oliveira (83 years) || LIVE From Kemmannu
Carmel School Science Exhibition Day || Kmmannu Channel
Final Journey of Prakash Crasta | LIVE From Kemmannu || Kemmannu Channel
ಪ್ರಗತಿ ಮಹಿಳಾ ಮಹಾ ಸಂಘ | ಸ್ತ್ರೀಯಾಂಚ್ಯಾ ದಿಸಾಚೊ ಸಂಭ್ರಮ್ 2024 || ಸಾಸ್ತಾನ್ ಘಟಕ್
Valentine’s Day Special❤️||Multi-lingual Covers || Symphony98 From Kemmannu
Rozaricho Gaanch December 2023 issue, Mount Rosary Church Santhekatte Kallianpur, Udupi
An Ernest Appeal From Milagres Cathedral, Kallianpur, Diocese of Udupi
Diocese of Udupi - Uzvd Decennial Special Issue
Final Journey Of Canute Pinto (52 years) | LIVE From Mount Rosary Church | Kallianpura | Udupi
Earth Angels Anniversary | Comedy Show 2024 | Live From St. Theresa’s Church | Kemmannu | Udupi
Kemmannu Cricket Match 2024 | LIVE from Kemmannu
Naturya - Taste of Namma Udupi - Order NOW
New Management takes over Bannur Mutton, Santhekatte, Kallianpur. Visit us and feel the difference.
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link