ಯು.ಟಿ. ಖಾದರ್- ರಮನಾಥ ರೈ ನಾಮಪತ್ರ ಸಲ್ಲಿಕೆ - ಅಭಿವೃದ್ದಿಗೆ ಎಲ್ಲರೂ ಕೈಜೋಡಿಸೋಣ: ಲೋಬೊ
Kemmannu News Network, 21-04-2023 10:33:58
ಮುಂಬಯಿ (ಆರ್‌ಬಿಐ), ಎ.20: ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಭರ್ಜರಿ ರೋಡ್ ಶೋ
ಮಂಗಳೂರು: ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇನಾಯತ್ ಅಲಿ ಅವರು ಗುರುವಾರ ಬೆಳಿಗ್ಗೆ ಕಾವೂರು ಮೈದಾನದಲ್ಲಿ ಬಹಿರಂಗ ಸಮಾವೇಶ ನಡೆಸಿ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಸಹಸ್ರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರೊಂದಿಗೆ ಭರ್ಜರಿ ರೋಡ್ ಶೋ ನಡೆಸಿ ಬಳಿಕ ಮಿನಿವಿಧಾನ ಸೌಧದಲ್ಲಿ ನಾಮಪತ್ರ ಸಲ್ಲಿಸಿದರು.
ಮಾಜಿ ಸಚಿವ ಅಭಯಚಂದ್ರ ಜೈನ್, ಕಾಂಗ್ರೆಸ್ ಪಕ್ಷ ನಿಂತ ನೀರಲ್ಲ ಹರಿವ ನೀರು. ಹೀಗಾಗಿ ಇನಾಯತ್ ಅಲಿ ಎನ್ನುವ ಯುವ ನಾಯಕನಿಗೆ ಪಕ್ಷ ಟಿಕೆಟ್ ನೀಡಿದೆ. ಓರ್ವ ಸಮರ್ಥ ಅಭ್ಯರ್ಥಿ ಗೆಲ್ಲಿಸುವ ಹೊಣೆಗಾರಿಕೆ ನಮ್ಮೆಲ್ಲರದ್ದಾಗಿದೆ ಎಂದರು.
ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬಳಿ ಅವರು ಮಾತನಾಡಿ, ಮಾಜಿ ಶಾಸಕ ಮೊಯಿದ್ದೀನ್ ಬಾವಾ ದುಡುಕಿನ ನಿರ್ಧಾರ ಕೈಗೊಳ್ಳದೆ ನಮ್ಮೊಂದಿಗೆ ಬರಬೇಕು. ನಾವೆಲ್ಲರೂ ಅವರೆಲ್ಲರ ಜೊತೆಗಿದ್ದೇವೆ. ಅವರು ವೈಮನಸ್ಸು ಏನೇ ಇದ್ದರೂ ಪಕ್ಷಕ್ಕಾಗಿ ದುಡಿಯಬೇಕು. ಇನಾಯತ್ ಅಲಿ ಅವರು ಯೋಗ್ಯ ಅಭ್ಯರ್ಥಿ ಎಂದು ಪಕ್ಷ ಗುರುತಿಸಿ ಟಿಕೆಟ್ ನೀಡಿದೆ ಎಂದರು.
ಅಭ್ಯರ್ಥಿ ಇನಾಯತ್ ಅಲಿ ಅವರು ಮಾತನಾಡಿ, ಪಕ್ಷ ನನ್ನ ಸೇವೆ ಗುರುತಿಸಿ ಟಿಕೆಟ್ ನೀಡಿದೆ. ನನ್ನನ್ನು ಎಲ್ಲ ಸಮುದಾಯದ ಜನರು ಪ್ರೀತಿಯಿಂದ ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ. ಮಂಗಳೂರು ಉತ್ತರ ಕ್ಷೇತ್ರದ ಕಾರ್ಯಕರ್ತರು, ಮುಖಂಡರಲ್ಲಿ ಏನೇ ವೈಮನಸ್ಸು ಇದ್ದರೂ ಅದನ್ನು ಮರೆತು ಎಲ್ಲರೂ ಒಂದಾಗಿ ಗೆಲುವಿಗೆ ಶ್ರಮಿಸಿ ಎಂದರು.
ಮಿಥುನ್ ರೈ, ಮಾಜಿ ಮೇಯರ್ ಕವಿತಾ ಸನಿಲ್, ಸುಧೀರ್ ಕುಮಾರ್ ಮುರಳಿ, ಗಿರೀಶ್ ಆಳ್ವ, ಶಾಹುಲ್ ಹಮೀದ್, ನೀರೇಶ್ ಪಾಲ್, ಉಮೇಶ್ ದಂಡೆಕೇರಿ, ಕೆ. ಅಭಯಚಂದ್ರ ಜೈನ್, ಯು. ಪಿ ಇಬ್ರಾಹಿಂ, ಶಶಿಕಲಾ ಪದ್ಮನಾಭ, ಜೇಸನ್ ಸುರತ್ಕಲ್, ಸುರೇಂದ್ರ ಕಂಬಳಿ, ಮುಫಿದಾ, ಚಂದ್ರಹಾಸ್ ಪೂಜಾರಿ, ಶ್ರೀನಿವಾಸ್ ಸಾಲಿಯಾನ್, ಆನಂದ ಅಮೀನ್, ನೀರಜ್ ಪಾಲ್, ಮಂಗಳೂರು ಉತ್ತರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಹಮ್ಮದ್ ಸಮೀರ್ ಇದ್ದರು.
.........................................
ಅನ್ಯಾಯದ ವಿರುದ್ಧ ನಡೆಯುವ ಚುನಾವಣೆ: ಯು.ಟಿ. ಖಾದರ್
ಮುಂಬಯಿ (ಆರ್‌ಬಿಐ), ಎ.20: ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಆಗಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಹಾಗೂ ಶಾಸಕ ಯು.ಟಿ. ಖಾದರ್ ಗುರುವಾರ ನಾಮಪತ್ರ ಸಲ್ಲಿಸಿದರು.
ಕಾರ್ಯಕರ್ತರು ಪಕ್ಷದ ಮುಖಂಡರು ಮೆರವಣಿಗೆಯಲ್ಲಿ ಸಾಗಿ ಉಳ್ಳಾಲ ನಗರಸಭೆ ಕಾರ್ಯಾಲಯದಲ್ಲಿರುವ ಚುನಾವಣಾಧಿಕಾರಿ ಕೆ.ರಾಜು ಅವರಿಗೆ ನಾಮಪತ್ರ ಸಲ್ಲಿಸಿದರು.
ಇದಕ್ಕೂ ಮೊಲದು ಅವರು ಸೋಮೇಶ್ವರ ದೇವಸ್ಥಾನ, ಉಳ್ಳಾಲ ದರ್ಗಾ ಸಹಿತ ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡಿದರು. ಬಳಿಕ ಆಯೋಜಿಸಿದ್ದ ಕಾರ್ಯಕರ್ತರ ಬಹಿರಂಗ ಸಭೆಯಯಲ್ಲಿ ಮಾತನಾಡಿದ ಯು.ಟಿ.ಖಾದರ್, ಇದು ಸತ್ಯ ಧರ್ಮದ, ಅನ್ಯಾಯದ ವಿರುದ್ಧದ ನ್ಯಾಯದ ಚುನಾವಣೆ ಆಗಿದೆ. ಜನ ವಿರೋದಿ, ತಾರತಮ್ಯ ಮಾಡುವ ಸರ್ಕಾರವನ್ನು ಕೆಳಗಿಸುವ ಚುನಾವಣೆ ಆಗಿದೆ ಎಂದರು.
ಹಲವು ಧರ್ಮ, ಜಾತಿಯ ಜನರ ನಡುವೆ ಸೌಹಾರ್ದದ ಕೊಂಡಿಯಾಗಿ ಕಾರ್ಯನಿರ್ವಹಿಸಿ, ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡು ತೃಪ್ತಿ ಇದೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸದಿಂದ ಮತ್ತೊಮ್ಮೆ ಗೆದ್ದು ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇನೆ ಎಂದರು.
ಸಮಾವೇಶದ ಬಳಿಕ ಅಬ್ಬಕ್ಕ ವೃತ್ತದವರೆಗೆ ಬೃಹತ್ ಮೆರವಣಿಗೆಯಲ್ಲಿ ತೆರಳಿ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಇಬ್ರಾಹೀಂ ಕೋಡಿಜಾಲ್, ಡಾ.ಕಣಚೂರು ಮೋನು, ಹರ್ಷರಾಜ್ ಮುದ್ಯ, ದಿನೇಶ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಮುಖಂಡರಾದ ರಾಕೇಶ್ ಮಲ್ಲಿ, ಈಶ್ವರ್ ಉಳ್ಳಾಲ್, ಮಮತಾ ಡಿ.ಎಸ್.ಗಟ್ಟಿ, ಚಂದ್ರಹಾಸ್ ಕರ್ಕೇರ, ಮಹಾಬಲ ಹೆಗ್ಡೆ, ಶಾಹುಲ್ ಹಮೀದ್, ಮುಹಮ್ಮದ್ ಮೋನು, ಅಶ್ರಫ್ ಕೆ.ಸಿ.ರೋಡ್, ಟಿ.ಎಸ್.ಅಬ್ದುಲ್ಲಾ ಸಾಮಣಿಗೆ, ಸಿದ್ದೀಕ್, ಫಾರೂಕ್ ಉಳ್ಳಾಲ್, ದೇವದಾಸ್ ಭಂಡಾರಿ, ಜೀವನ್ ದಾಸ್ ಶೆಟ್ಟಿ, ಪದ್ಮನಾಭ ನರಿಂಗಾನ, ಮುಸ್ತಫಾ ಹರೇಕಳ ಇದ್ದರು.
.......................................
9ನೇ ಬಾರಿ ನಾಮಪತ್ರ ಸಲ್ಲಿಸಿದ ಬಿ.ರಮಾನಾಥ ರೈ: ಕಾರ್ಯಕರ್ತರ ಸಾಥ್
ಮುಂಬಯಿ (ಆರ್‌ಬಿಐ), ಎ.20: ಬಂಟ್ವಾಳ ಅಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿ ಮಾಜಿ ಸಚಿವ ಬಿ. ರಮಾನಾಥ ರೈ ಗುರುವಾರ ನಾಮಪತ್ರ ಸಲ್ಲಿಸಿದರು. 12 . 35 ಕ್ಕೆ ಬಿ.ಸಿ.ರೋಡಿನ ವಿಧಾನಸೌಧದ ಚುನಾವಣಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು.
ಬಂಟ್ವಾಳದ ತಿರುಮಲ ವೆಂಕಟರಮಣ ದೇವಸ್ಥಾನದ ಬಳಿಯಿಂದ ಮೆರವಣಿಗೆ ಆರಂಭಕ್ಕೂ ಮೊದಲು ಬಿ. ರಮಾನಾಥ ರೈ ಅವರು ನಂದಾವರ ವಿನಾಯಕ ಶಂಕರನಾರಾಯಣ ದುರ್ಗಾಂಬ ದೇವಸ್ಥಾನ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮೊಡಂಕಾಪು ಚರ್ಚ್‍ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಿತ್ತಬೈಲು ಮೊಯಿದ್ದೀನ್ ಜುಮ್ಮಾ ಮಸೀದಿ, ಕೆಳಗಿನಪೇಟೆ ಮಸೀದಿಯಲ್ಲೂ ಪ್ರಾರ್ಥಿಸಿದರು. ನಂತರ ಬಂಟ್ವಾಳದ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ನಾಮಪತ್ರ ಸಲ್ಲಿಸುವುದಕ್ಕೂ ಮೊದಲು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಮಾನಾಥ ರೈ, ನನ್ನ ಸುದೀರ್ಘ ಜನಸೇವೆಯ ಜೀವನದಲ್ಲಿ 9 ನೇ ಬಾರಿ ಒಂದೇ ಪಕ್ಷದಿಂದ ನಾಮಪತ್ರ ಸಲ್ಲಿಸುತ್ತಿದ್ದೇನೆ. ಎಂತಹುದೇ ಪ್ರತೀಕೂಲ ವಾತಾವರಣದಲ್ಲಿ ನನ್ನ ಜೊತೆನಿಂತ ನಿಮ್ಮ ಋಣವನ್ನು ಜನ್ಮಕ್ಕೂ ತೀರಿಸಲು ಸಾಧ್ಯವಿಲ್ಲ ಎಂದರು.
ಸಹಸ್ರ ಸಹಸ್ರ ಸಂಖ್ಯೆಯಲ್ಲಿ ನನ್ನೊಂದಿಗೆ ಪಾದಯಾತ್ರೆಯಲ್ಲಿ ಭಾಗವಹಿಸಿ, ನನ್ನನ್ನು ಆಶೀರ್ವದಿಸಿದ ತಮಗೆಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಅಧಿಕಾರದಲ್ಲಿದ್ದಾಗಲೂ ನಾನು ತಪ್ಪುಗಳನ್ನು ಮಾಡಿಲ್ಲ, ತಮಗೆಲ್ಲ ಅಗೌರವವನ್ನುಂಟು ಮಾಡುವ ಯಾವುದೇ ಕೃತ್ಯವನ್ನು ಮಾಡಿಲ್ಲ. ಕಳೆದ ಬಾರಿಯ ಚುನಾವಣೆಯಲ್ಲಿ ನನ್ನನ್ನು ಅಪಪ್ರಚಾರದಿಂದ ಸೋಲಿಸಿದರು. ಸೋತ ಬಗ್ಗೆ ನನಗೆ ಬೇಸರವಿಲ್ಲ, ಆದರೆ ಸೋಲಿಸಿದ ವಿಧಾನದ ಬಗ್ಗೆ ಬೇಸರವಿದೆ. ಈ ಚುನಾವಣೆಯಲ್ಲಿ ತಮ್ಮೆಲ್ಲರ ಸಹಕಾರದಿಂದ ಬಂಟ್ವಾಳದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸೋಣ ಎಂದು ಹೇಳಿದರು.
ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಶಾಸಕ ರೋಝಿ ಜಾನ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಸುಳ್ಯ ಅಭ್ಯರ್ಥಿ ಕೃಷ್ಣಪ್ಪ ಜಿ., ಪಕ್ಷ ಪ್ರಮುಖರಾದ ಎಂ.ಕೆ.ಎಂ.ಅಶ್ರಫ್, ಶೀಬಾ ರಾಮಚಂದ್ರನ್, ಜೋಕಿಂ ಡಿಸೋಜ, ಧನಂಜಯ ಅಡ್ಪಂಗಾಯ, ವೆಂಕಪ್ಪ ಗೌಡ, ನಝೀರ್ ಬಜಾರ್, ಕೌಶಲ್ ಶೆಟ್ಟಿ, ರಾಕೇಶ್ ಮಲ್ಲಿ, ಕೃಪಾ ಅಮರ್ ಆಳ್ವ, ಪ್ರಸಾದ್ ಪಾಣಾಜೆ, ಲುಕ್ಮಾನ್ ಬಂಟ್ವಾಳ, ಫಾರೂಕ್ ಬಯಬೆ, ಉಸ್ಮಾನ್ ಕರೋಪಾಡಿ, ಬೇಬಿ ಕುಂದರ್, ಸುದೀಪ್ ಶೆಟ್ಟಿ, ಪಿಯೂಸ್ ಎಲ್. ರೊಡ್ರಿಗಸ್, ಬಿ.ಎಚ್.ಖಾದರ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಂ.ಎಸ್.ಮುಹಮ್ಮದ್, ಮಾಯಿಲಪ್ಪ ಸಾಲ್ಯಾನ್, ಅಬ್ಬಾಸ್ ಅಲಿ, ಜಯಂತಿ ಪೂಜಾರಿ, ಮುಹಮ್ಮದ್ ಶರೀಫ್, ಜನಾರ್ದನ ಚೆಂಡ್ತಿಮಾರ್, ಸುಭಾಶ್ಚಂದ್ರ ಶೆಟ್ಟಿ, ಉಮೇಶ್ ಸಪಲ್ಯ, ಸಂಜೀವ ಪೂಜಾರಿ, ನಾರಾಯಣ ನಾಯ್ಕ್, ವಾಸು ಪೂಜಾರಿ, ಸಿದ್ದೀಕ್ ಬೊಗೋಡಿ, ಸಿದ್ದೀಕ್ ಸರವು, ನ್ಯಾಯವಾದಿಗಳಾದ ಚಂದ್ರಶೇಖರ ಪೂಜಾರಿ, ಚಿದಾನಂದ ಕಡೇಶ್ವಾಲ್ಯ, ಸುರೇಶ್ ಕುಲಾಲ್ ನಾವೂರು, ಉಮಾಕರ ಮತ್ತಿತರರು ಭಾಗವಹಿಸಿದ್ದರು.
......…..........................
ಮಂಗಳೂರು ಅಭಿವೃದ್ದಿಗೆ ಎಲ್ಲರೂ ಕೈಜೋಡಿಸೋಣ: ಲೋಬೊ
ಮುಂಬಯಿ (ಆರ್‌ಬಿಐ), ಎ.20: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಜೆ.ಆರ್. ಲೋಬೋ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು.
ಬೆಳಗ್ಗೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅವರು ಪಕ್ಷದ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಪಾದಯಾತ್ರೆಯ ಮೂಲಕ ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಮಂಗಳೂರಿನ ನಗರ ಅಭಿವೃದ್ಧಿಗೆ ನಾವೆಲ್ಲರೂ ಕೈಜೋಡಿಸಬೇಕು. ಮಂಗಳೂರ ಅನ್ನು ರಾಜ್ಯದ 2 ನೇ ನಗರವಾಗಿ ಅಭಿವೃದ್ಧಿ ಪಡಿಸೋಣ. ಮಂಗಳೂರಿನಲ್ಲಿ ಉದ್ಯೋಗದಾತ ಕಂಪನಿಗಳು ಬರಬೇಕು. ಸ್ಥಳೀಯವಾಗಿ ಉದ್ಯೋಗ ಹೆಚ್ಚಳ ಆಗಬೇಕು. ಜನತೆ ಸೌಹಾರ್ದತೆಯಿಂದ ಸಹೋದರ ಭಾವನೆಯಿಂದ ಬದುಕಬೇಕು ಎಂದರು.
ನಮ್ಮ ಸಂವಿಧಾನದ ಆಶಯಗಳಂತೆ ಜಾತಿ-ಮತ ಬೇಧವಿಲ್ಲದೆ. ಎಲ್ಲ ಧರ್ಮಗಳನ್ನು ಸಮಾನವಾಗಿ ಕಂಡು, ಎಲ್ಲರನ್ನು ಪ್ರೀತಿಸಿ ಸಾಮರಸ್ಯದ ಬದುಕನ್ನು ಕಾಣಬೇಕು. ಅದೇ ನಮ್ಮ ಗುರಿ. ನಮ್ಮಲ್ಲಿ ಬಂಡವಾಳ ಹೂಡಿಕೆಯಾಗಿ, ಉದ್ಯೋಗ ಸೃಷ್ಟಿಯಾಗಿ ನಮ್ಮ ಯುವಕ, ಯುವತಿಯರಿಗೆ ಮಂಗಳೂರಿನಲ್ಲೇ ಉದ್ಯೋಗ ದೊರಕುವ ವಾತಾವರಣ ನಿರ್ಮಾಣವಾಗಬೇಕು. ಯಾವುದೇ ಜಾತಿ- ಮತ- ಧರ್ಮದ ಬೇಧವಿಲ್ಲದೆ ಉತ್ತಮ ಬಾಳ್ವೆ ಮಾಡುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಮಾಜಿ ಮೇಯರ್‌ಗಳಾದ ಶಶಿಧರ ಹೆಗ್ಡೆ, ಲ್ಯಾನ್ಸಿ ಲಾಟ್ ಪಿಂಟೋ, ಮಾಜಿ ಕಾರ್ಪೊರೇಟರ್ ನವಾಝ್, ಪಕ್ಷದ ಮುಖಂಡರಾದ ಟಿ.ಕೆ.ಸುಧೀರ್, ಹರೀಶ್ ಇದ್ದರು.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.
Milagres Cathedral, Kallianpur, Udupi - Parish Bulletin - January 2025 Issue
Rozaricho Gaanch 2024 December Issue - Mount Rosary Church, Santhekatte
inal Journey of Patrick John Dalmeida (78 years) | LIVE from Barkur
Annual Church Feast 2025 | St Theresa’s Church, Kemmannu
Vespers 2025 | St. Theresa’s Church, Kemmannu
Final Journey of Rocky D’Souza | LIVE from Santhekatte
Confraternity Sunday | LIVE from St.Theresa’s Church, Kemmannu, Udupi
Final Journey of Wilson John Maxim Soares | LIVE from Santhekatte, Kemmannu
0:24 / 2:30:40 NEW YEAR MASS 2025 | LIVE from Kemmannu | Diocese of Udupi
CHRISTMAS MASS -2024 | St. Theresa’s Church, Kemmannu
Land/Houses for Sale in Kaup, Manipal, Kallianpur, Santhekatte, Uppor, Nejar, Kemmannu, Malpe, Ambalpady.
Flat for sale at Mandavi Casa Grande, Santhekatte, Udupi - Please contact 9845424071
Annual Day - 2024 | Carmel English School, Kemmannu
Final Journey of Juliana Lewis (88 years) | LIVE from Milagres, Kallianpur, Udupi
Naturya - Taste of Namma Udupi - Order NOW
Focus Studio, Near Hotel Kidiyoor, Udupi
Earth Angels - Kemmannu Since 2023
Kemmannu Channel - Ktv Live Stream - To Book - Contact Here
Click here for Kemmannu Knn Facebook Link