ಜನಸಾಮಾನ್ಯರು ಆರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿ ಹೊಂದುವುದು ಅತ್ಯವಶ್ಯ :  ಡಿಹೆಚ್‍ಓ ಡಾ. ಬಸವರಾಜ್ ಹುಬ್ಬಳ್ಳಿ


Richard D’souza
Kemmannu News Network, 07-04-2025 18:57:41


Write Comment     |     E-Mail To a Friend     |     Facebook     |     Twitter     |     Print


ಜನಸಾಮಾನ್ಯರು ಆರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿ ಹೊಂದುವುದು ಅತ್ಯವಶ್ಯ :  ಡಿಹೆಚ್‍ಓ ಡಾ. ಬಸವರಾಜ್ ಹುಬ್ಬಳ್ಳಿ

  ಉಡುಪಿ, ಏಪ್ರಿಲ್ 07 (ಕವಾ): ಪ್ರತಿಯೊಬ್ಬ ಜನಸಾಮಾನ್ಯರು ಆರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿ ಹೊಂದುವುದರೊಂದಿಗೆ ಸದೃಢವಾದ ಆರೋಗ್ಯ ಕಾಪಾಡಿಕೊಂಡು ಸ್ವಾಸ್ಥ್ಯ ಜೀವನ ನಡೆಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ ಹೇಳಿದರು.
  ಅವರು ಇಂದು ನಗರದ ಮಿಷನ್ ಆಸ್ಪತ್ರೆ ರೋಡ್‍ನ ಕ್ರಿಶ್ಚಿಯನ್ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ ಘಟಕ, ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ ವಿಭಾಗ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಕ್ರಿಶ್ಚಿಯನ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮಿಷನ್ ಆಸ್ಪತ್ರೆ ರೋಡ್ ಉಡುಪಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ, ಪೊಲೀಸ್ ಉಪಾಧೀಕ್ಷಕರ ಕಚೇರಿ ಉಪವಿಭಾಗ ಹಾಗೂ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಇವರ ಸಹಯೋಗದಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
 ಸಾರ್ವಜನಿಕರ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಹಾಗೂ ಅವರುಗಳ ಒಳಿತಿಗಾಗಿ ವಿಶ್ವ ಆರೋಗ್ಯ ಸಂಸ್ಥೆಯು ಪ್ರತೀ ವರ್ಷ ವಿಶ್ವ ಆರೋಗ್ಯ ದಿನಾಚರಣೆಯನ್ನು ಆಚರಿಸುತ್ತಾ ಬರುತ್ತಿದೆ. ಪ್ರತಿಯೊಂದು ಆರಂಭಗಳು ಆರೋಗ್ಯಕರವಾಗಿದ್ದಲ್ಲಿ ನಮ್ಮ ಭವಿಷ್ಯವು ಭರವಸೆಯಿಂದ ಕೂಡಿರುತ್ತವೆ ಎಂದರು.

 ಯಾವುದೇ ಕಾಯಿಲೆಗಳು ಬಂದ ನಂತರ ಅದಕ್ಕೆ ಚಿಕಿತ್ಸೆ ಪಡೆಯುವ ಬದಲು ಕಾಯಿಲೆಗಳು ಬಾರದಂತೆ ನೋಡಿಕೊಳ್ಳುವ ಆರೋಗ್ಯ ಶೈಲಿ ಹಾಗೂ ಆಹಾರ ಪದ್ಧತಿ ಕ್ರಮಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದರು.
 ಜಿಲ್ಲಾ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ್ ಮಾತನಾಡಿ, ರಕ್ತದೊತ್ತಡ, ಮಧುಮೇಹ ಸೇರಿದಂತೆ ಮತ್ತಿತರ ಕಾಯಿಲೆಗಳು ಚಿಕ್ಕ ಮಕ್ಕಳಿಗೂ ಬರುವ ಸಾಧ್ಯತೆ ಇದ್ದು, ಈ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ಹೊಂದಿ ಅದನ್ನು ಪೋಷಕರಿಗೆ ಹಾಗೂ ಸುತ್ತಮುತ್ತಲಿನವರಿಗೆ ಅರಿವು ಮೂಡಿಸಿದಾಗ ಅವರುಗಳು ನಿರಂತರ ಆರೋಗ್ಯ ತಪಾಸಣೆ ಮಾಡಿಸುತ್ತಾರೆ. ಆರೋಗ್ಯಕ್ಕೆ ಪೂರಕವಾದ ದೈಹಿಕ ಚಟುವಟಿಕೆ, ಸಮತೋಲಿತ ಆಹಾರ ತೆಗೆದುಕೊಳ್ಳುತ್ತಾರೆ. ಇದರಿಂದ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ ಎಂದರು.
  ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ಆರ್ಥಿಕ ಸಂಪತ್ತಿಗಿಂತ ಆರೋಗ್ಯಕರವಾಗಿ ಇರುವುದೇ ದೊಡ್ಡ ಸಂಪತ್ತು. ಆರೋಗ್ಯವಂತರಾಗಿದ್ದಾಗ ನೆಮ್ಮದಿಯ ಜೀವನ ನಡೆಸಲು ಸಾಧ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಠಿಯಿಂದ ಆರೋಗ್ಯ ಇಲಾಖೆಯು ನಿರಂತರ ಆರೋಗ್ಯ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಿದೆ. ಇಂತಹ ಆರೋಗ್ಯ ಶಿಬಿರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ, ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

  ಜಿಲ್ಲಾ ಎನ್.ಸಿ.ಡಿ ಕೋ-ಆರ್ಡಿನೇಟರ್ ಡಾ. ಅಂಜಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಯೊಬ್ಬರೂ ಸುಸ್ಥಿರ ಆರೋಗ್ಯ ಹೊಂದಲು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ  ಅಸಾಂಕ್ರಾಮಿಕ ರೋಗಗಳ ಪರೀಕ್ಷೆಯನ್ನು, ಮಾರಣಾಂತಿಕ ಕಾಯಿಲೆಗಳ ಬಗ್ಗೆ ಮಾಹಿತಿಯನ್ನು, ಆಪ್ತಸಮಾಲೋಚನೆಯನ್ನು ತಜ್ಞ ವೈದ್ಯರುಗಳು ನೀಡಲಿದ್ದು, ಈ ಶಿಬಿರದ ಸಂಪೂರ್ಣ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಸಲಹೆ ನೀಡಿದರು.
  ಜಿಲ್ಲಾ ಸರ್ಜನ್ ಡಾ. ಅಶೋಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ನ್ಯೂಸಿಟಿ ಕಾಲೇಜ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳಿಂದ ಆರೋಗ್ಯ ಕಾಳಜಿ ಕುರಿತು ಕಿರುನಾಟಕ ಪ್ರದರ್ಶಿಸಲಾಯಿತು.
  ಕಾರ್ಯಕ್ರಮದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯ, ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಅಧ್ಯಕ್ಷ ಡಾ. ಸುರೇಶ್ ಶೆಣೈ, ಮಂಗಳೂರು ಎ.ಜೆ ಆಸ್ಪತ್ರೆಯ ರೇಡಿಯೇಷನ್ ಅಂಕೊಲಾಜಿ ವಿಭಾಗ ಮುಖ್ಯಸ್ಥ ಡಾ. ಕಮಲಾಕ್ಷ ಶೆಣೈ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಿ.ಇ.ಓ ರಾಜೇಶ್ ಶೇರಿಗಾರ್, ಕ್ರಿಶ್ಚಿಯನ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮುಖ್ಯೋಪಾಧ್ಯಾಯಿನಿ ಹೆಲೆನ್ ಪಿ.ಎಸ್.ಐ ಈರಣ್ಣ, ಜಿಲ್ಲಾ ಆಸ್ಪತ್ರೆಯ ಆಪ್ತ ಸಮಾಲೋಚಕ ಮನು ಎಸ್.ಬಿ, ನ್ಯೂಸಿಟಿ ಕಾಲೇಜ್ ಆಫ್ ನರ್ಸಿಂಗ್ ಇಲ್ಲಿನ ಅಧ್ಯಾಪಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
 ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಸ್ವಾಗಿತಿಸಿ, ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ನಿರೂಪಿಸಿದರೆ, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ವಂದಿಸಿದರು.

 ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮಧುಮೇಹ ರಕ್ತ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ, ಹೃದ್ರೋಗ ತಪಾಸಣೆ, ಗರ್ಭಕಂಠ ಕ್ಯಾನ್ಸರ್ ತಪಾಸಣೆ, ಸ್ತನ ಕ್ಯಾನ್ಸರ್ ತಪಾಸಣೆ, ತಂಬಾಕು ದುಷ್ಪರಿಣಾಮಗಳ ಬಗ್ಗೆ ಆಪ್ತ ಸಮಾಲೋಚನೆ, ಬಾಯಿ ಕ್ಯಾನ್ಸರ್, ಕಣ್ಣಿನ ಪರೀಕ್ಷೆ, ಜೀವನ ಶೈಲಿ ಮಾರ್ಪಾಡು ಕುರಿತು ಆಪ್ತಸಮಾಲೋಚನೆ ನಡೆಸಲಾಯಿತು.

ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ
   ಉಡುಪಿ, ಏಪ್ರಿಲ್ 07 (ಕವಾ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಪ.ಜಾತಿ, ಪ.ಪಂಗಡಗಳ ಸಂಘಟನೆಗಳು ಇವರ ಸಂಯುಕ್ತ ಆಶ್ರಯದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆ ಸಮಾರಂಭವು ಏಪ್ರಿಲ್ 14 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
   ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು ಶಾಸಕ ಯಶ್‍ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
   ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಹೆಚ್.ಸಿ ಮಹದೇವಪ್ಪ, ಸಂಸದರಾದ ಬಿ. ವೈ. ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ. ಸುನೀಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಶಾಸಕರುಗಳಾದ ಎಸ್.ಎಲ್.ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಹಾಗೂ ಮತ್ತಿತರು ಭಾಗವಹಿಸಲಿದ್ದು, ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್ ಉಪನ್ಯಾಸ ನೀಡಲಿದ್ದಾರೆ.

ಮಿನಿ ಉದ್ಯೋಗ ಮೇಳ
  ಉಡುಪಿ, ಏಪ್ರಿಲ್ 07 (ಕವಾ): ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಏಪ್ರಿಲ್ 8 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ.
 ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‍ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ  ಭಾಗವಹಿಸಬಹುದಾಗಿದೆ.
 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.

ವ್ಯಕ್ತಿ ನಾಪತ್ತೆ
  ಉಡುಪಿ, ಏಪ್ರಿಲ್ 07 (ಕವಾ): ನಗರದ ಬಿಲ್ಡಿಂಗ್ ಒಂದರಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ದೀಪಕ್ ನಿಶಾದ್ (26) ಎಂಬ ವ್ಯಕ್ತಿಯು ಮದುವೆ ನಿಶ್ಚಯವಾದ ಹಿನ್ನೆಲೆ, ಮದುವೆ ತಯಾರಿ ಮಾಡಿಕೊಳ್ಳುವ ಸಲುವಾಗಿ ಉಡುಪಿಯಿಂದ ತನ್ನ ಸ್ವಂತ ಊರಿಗೆ ಹೋಗುವುದಾಗಿ ತಿಳಿಸಿ ಹೋದವರು, ಈವರೆಗೂ ಊರಿಗೂ ಹೋಗದೇ, ಕೆಲಸದ ಸ್ಥಳಕ್ಕೂ ಬಾರದೇ ನಾಪತ್ತೆಯಾಗಿರುತ್ತಾರೆ.

 

 5 ಅಡಿ 3 ಇಂಚು ಎತ್ತರ, ಗೋಧಿ ಮೈಬಣ್ಣ, ಹೊಂದಿದ್ದು, ಹಿಂದಿ ಹಾಗೂ ಭೋಜ್‍ಪುರಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಐ ಮೊ.ನಂ: 9480805448, ಪಿ.ಎಸ್.ಐ ಮೊ.ನಂ: 9480805475 ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ರೆಡ್‍ಕ್ರಾಸ್ ಭವನದಲ್ಲಿ ವಿಶ್ವ ಆರೋಗ್ಯ ದಿನ ಆಚರಣೆ
 ಉಡುಪಿ, ಏಪ್ರಿಲ್ 07 (ಕವಾ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‍ಕ್ರಾಸ್ ಉಡುಪಿ ಜಿಲ್ಲೆ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಗಳ ಸಹಯೋಗದೊಂದಿಗೆ ಇಂದು ಅಜ್ಜರಕಾಡು ರೆಡ್‍ಕ್ರಾಸ್ ಭವನದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.
 ಕಾರ್ಯಕ್ರಮವನ್ನು ಉದ್ಘಾಟಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ. ಮಾತನಾಡಿ, ಸಂಪೂರ್ಣ ಆರೋಗ್ಯ ಎಂದರೆ ಶಾರೀರಿಕ, ಮಾನಸಿಕ, ಸಾಮಾಜಿಕ ಆರೋಗ್ಯವಾಗಿದೆ. ಪ್ರಸಕ್ತ ಸಾಲಿನ ಆರೋಗ್ಯ ದಿನಾಚರಣೆಯ ಘೋಷವಾಕ್ಯವು ತಾಯಂದಿರ ಮತ್ತು ನವಜಾತ ಶಿಶುಗಳ ಆರೋಗ್ಯ ಹಾಗು ಬದುಕುಳಿಯುವಿಕೆಯನ್ನು ಹೆಚ್ಚಿಸುವದರ ಮೇಲೆ ಕೇಂದ್ರಿಕರಿಸುತ್ತದೆ. ಇದರ ಜೊತೆಗೆ ತಪ್ಪಿಸಬಹುದಾದ ತಾಯಂದಿರು ಮತ್ತು ಶಿಶು ಮರಣಗಳ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ ಎಂದರು.

 ಎ.ವಿ.ಬಾಳಿಗಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಕಾವ್ಯ ಟಿ. ಉಪನ್ಯಾಸ ನೀಡಿ ಮಾತನಾಡುತ್ತಾ, ಜನರಿಗೆ ಸಾಮಾನ್ಯ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದು ಇಂದಿನ ಅಗತ್ಯ. ಈ ಅರಿವಿನಿಂದ ಹಲವು ರೋಗಗಳು ಬರದಂತೆ ತಡೆಯಲು ಸಾಧ್ಯ. ಆಹಾರ, ನಿದ್ರೆ, ಮನೋನಿಗ್ರಹಗಳು ಸದೃಢ ಆರೋಗ್ಯಕ್ಕೆ ಅತಿ ಅಗತ್ಯ ಎಂದರು.
ರೆಡ್‍ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರತ್ನಾ ಸುವರ್ಣ, ರೆಡ್ ಕ್ರಾಸ್ ಆಡಳಿತ ಮಂಡಳಿಯ ಸದಸ್ಯ ಚಂದ್ರಶೇಖರ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಇಲಾಖೆಯ ಯೋಜನಾಧಿಕಾರಿ ಶಿವಾಜಿ, ವಿಕಲಚೇತನ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ ಉಪಸ್ಥಿತರಿದ್ದರು.
ರೆಡ್‍ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ, ನಿರೂಪಿಸಿದರೆ, ರೆಡ್‍ಕ್ರಾಸ್ ಖಚಾಂಚಿ ರಮಾದೇವಿ ವಂದಿಸಿದರು.

Write your Comments on this Article
Your Name
Native Place / Place of Residence
Your E-mail
Your Comment   You have characters left.
Security Validation
Enter the characters in the image above
    
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. Kemmannu.com will not be responsible for any defamatory message posted under this article.
Please note that under 66A of the IT Act, sending offensive or menacing messages through electronic communication service and sending false messages to cheat, mislead or deceive people or to cause annoyance to them is punishable. It is obligatory on kemmannu.com to provide the IP address and other details of senders of such comments, to the authority concerned upon request. Hence, sending offensive comments using kemmannu.com will be purely at your own risk, and in no way will Kemmannu.com be held responsible.
Similarly, Kemmannu.com reserves the right to edit / block / delete the messages without notice any content received from readers.




| Special Program in collaboration with Kemmannu Y
View More

Nisarga Point Fernandes Leisure & Resort inaugurated at Moodukudru, Kallianpur, UdupiNisarga Point Fernandes Leisure & Resort inaugurated at Moodukudru, Kallianpur, Udupi
Final Journey of Joseph Simon Monis (67 years) | LIVE from Pamboor | UdupiFinal Journey of Joseph Simon Monis (67 years) | LIVE from Pamboor | Udupi
Final Journey of Josephine Pinto (79 years) | LIVE from Sasthan | UdupiFinal Journey of Josephine Pinto (79 years) | LIVE from Sasthan | Udupi
Final Journey of Mr. Michael Braganza (86 Years) | LIVE From KundapuraFinal Journey of Mr. Michael Braganza (86 Years) | LIVE From Kundapura
Milarchi Lara, Milagres Cathedral, Kallinapur, Udupi District - Parish Bulletin_ January 2026Milarchi Lara, Milagres Cathedral, Kallinapur, Udupi District - Parish Bulletin_ January 2026
Rozaricho Gaanch Jan 2026 Issue From Mount Rosary Church, Kallianpur, Santhekatte, Udupi.Rozaricho Gaanch Jan 2026 Issue From Mount Rosary Church, Kallianpur, Santhekatte, Udupi.
Final Journey of Veronica Precilla D’Souza (76 Years) | LIVE From KallainpurFinal Journey of Veronica Precilla D’Souza (76 Years) | LIVE From Kallainpur
inal Journey Of Rosy Lewis (99 Years) | LIVE from Milagres, Kallianpur, Udupiinal Journey Of Rosy Lewis (99 Years) | LIVE from Milagres, Kallianpur, Udupi
Final Journey Of George Miranda (79 Years) | LIVE from UdupiFinal Journey Of George Miranda (79 Years) | LIVE from Udupi
Final Journey of Mr. Lawrence D,Almeida (77 years) | LIVE from Kemmannu | UdupiFinal Journey of Mr. Lawrence D,Almeida (77 years) | LIVE from Kemmannu | Udupi
Vespers 2026 | St Theresa’s Church, Kemmannu | UdupiVespers 2026 | St Theresa’s Church, Kemmannu | Udupi
Annual Church Feast 2026 | St Theresa’s Church, Kemmannu | UdupiAnnual Church Feast 2026 | St Theresa’s Church, Kemmannu | Udupi
IN Final Journey Of Prescilla Quadros (83 Years) | LIVE From Kemmannu | UdupiIN Final Journey Of Prescilla Quadros (83 Years) | LIVE From Kemmannu | Udupi
Vespers 2026 | Mount Rosary Church, Santhekatte | UdupiVespers 2026 | Mount Rosary Church, Santhekatte | Udupi
Annual Church Feast 2026 | Mount Rosary Church, Santhekatte | UdupiAnnual Church Feast 2026 | Mount Rosary Church, Santhekatte | Udupi
Final Journey of Cecilia Menezes( 88 Years ) | LIVE From Kemmannu | UdupiFinal Journey of Cecilia Menezes( 88 Years ) | LIVE From Kemmannu | Udupi
New year Mass | St. Theresa Church, Kemmannu | UdupiNew year Mass | St. Theresa Church, Kemmannu | Udupi
Christman Mass | St. Theresa Church, Kemmannu | UdupiChristman Mass | St. Theresa Church, Kemmannu | Udupi
Silver Jubilee Rev. Bishop Gerald John Mathias and Golden Jubilee Rev. Sr. Jaya Mathias, Milagres, UdupiSilver Jubilee Rev. Bishop Gerald John Mathias and Golden Jubilee Rev. Sr. Jaya Mathias, Milagres, Udupi
Annual Day Calebration 2025 | Carmel English School, KemmannuAnnual Day Calebration 2025 | Carmel English School, Kemmannu
Final Journey Of Francis Paul Quadros (59 Years) | LIVE From UdupiFinal Journey Of Francis Paul Quadros (59 Years) | LIVE From Udupi
Land/Houses for Sale in Kaup, Manipal, Kallianpur, Santhekatte, Uppor, Nejar, Kemmannu, Malpe, Ambalpady.Land/Houses  for Sale in Kaup, Manipal, Kallianpur, Santhekatte, Uppor, Nejar, Kemmannu, Malpe, Ambalpady.
Focus Studio, Near Hotel Kidiyoor, UdupiFocus Studio, Near Hotel Kidiyoor, Udupi